BIG NEWS : ಜ.19, 25 ರಂದು ‘KPSC’ ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳು ನಡೆಯಲಿದೆ.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮಾತನಾಡಿದರು.

ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಶಿವಮೊಗ್ಗ ನಗರದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ನಗರದಲ್ಲಿ ಒಟ್ಟು 7182 ಅಭ್ಯರ್ಥಿಗಳು ಹಾಗೂ ಜ.25 ರಂದು ನಡೆಯುವ ನಿರ್ದಿಷ್ಟ ಪತ್ರಿಕೆಗೆ 6414 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ.

ಈ ನಿಯಮಗಳ ಪಾಲನೆ ಕಡ್ಡಾಯ

ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ.

ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್ಚೇರ್ ಒದಗಿಸಲಾಗುವುದು ಎಂದರು.ಪರೀಕ್ಷಾ ದಿನದಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಿ ಆದೇಶಿಸಲಾಗಿದೆ ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.

ಎಲ್ಲಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಅಭ್ಯರ್ಥಿಗಳು ಪೇಪರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ, ವಸ್ತ್ರ ಸಂಹಿತೆಯನ್ನು ಎಲ್ಲಾ ಅಭ್ಯರ್ಥಿಗಳು ಪಾಲನೆ ಮಾಡಬೇಕೆಂದು ತಿಳಿಸಿ ಒಂದು ಭಾರಿ ಕೇಂದ್ರದೊಳಗೆ ತಪಾಸಣೆ ಮಾಡಿದ ನಂತರ ಕೊಠಡಿಗೆ ಬಂದರೆ, ಪರೀಕ್ಷೆ ಮುಕ್ತಾಯದ ನಂತರವೇ ಹೊರಗೆ ಬಿಡಬೇಕೆಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read