HomeCrimeBIG NEWS: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಐವರಿಗೆ ಇರಿತ

BIG NEWS: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಐವರಿಗೆ ಇರಿತ

ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮರಿ

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಬಳಿ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಐವರಿಗೆ ಚಾಕುವಿನಿಂದ ಇರಿಯಲಾಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ರಾತ್ರಿ ಆಲ್ಕೋಳ ಸರ್ಕಲ್ ಸಮೀಪದ ವಿಶಾಲ್ ಮಾರ್ಟ್ ಬಳಿ ಇರುವ ಎಲ್ಐಸಿ ಕಚೇರಿ ಹಿಂಭಾಗದಲ್ಲಿ ಪವನ್ ಮತ್ತು ಕಿರಣ್ ಅವರುಗಳ ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಕಿರಣ್ ಗ್ಯಾಂಗ್ ನ ಐವರಿಗೆ ಚೂರಿ ಇರಿತದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎರಡು ಗುಂಪುಗಳ ನಡುವೆ ಆಗಾಗ್ಗೆ ಘರ್ಷಣೆ ನಡೆಯುತ್ತಿದ್ದು, ಗುರುವಾರ ಇದು ವಿಕೋಪಕ್ಕೆ ತಿರುಗಿ ಹೊಡೆದಾಟ ನಡೆದಿದೆ. ಗಾಯಾಳುಗಳಿಗೆ ಹೆಚ್ಚಿನ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಮುಖ ಆರೋಪಿ ಪವನ್ ಮತ್ತು ಆತನ ತಂಡದ ಸದಸ್ಯರಿಗಾಗಿ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular