HomeKarnatakaBIG NEWS : ಫ್ಲೆಕ್ಸ್, ಪೋಸ್ಟರ್ ತೆರವು ವಿಚಾರ : ಚುನಾವಣಾ ಆಯೋಗದಿಂದ ಮಹತ್ವದ ಸುತ್ತೋಲೆ

BIG NEWS : ಫ್ಲೆಕ್ಸ್, ಪೋಸ್ಟರ್ ತೆರವು ವಿಚಾರ : ಚುನಾವಣಾ ಆಯೋಗದಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಪೋಸ್ಟರ್, ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ ಹೊರಡಿಸಿದೆ.

ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ.

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇ ಮೇಲ್ ವಿಳಾಸ [email protected] [email protected] ಕ್ಕೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಉಪ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ಎಲ್ಲಾ ಜಿಲ್ಲೆಯ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular