ಬೆಂಗಳೂರು : ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಮೇ 12ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಬೇಕು ಎಂದು ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.
ಕನಿಷ್ಟ ಅವಧಿ ಪೂರ್ಣಗೊಳಿಸದವರನ್ನು, ನಿವೃತ್ತಿಗೆ ಎರಡು ವರ್ಷಕ್ಕಿಂತ ಕಡಿಮೆ ಅವಧಿ ಇರುವವರನ್ನು ವರ್ಗಾವಣೆ ಮಾಡಬಾರದು. ಸಕಾರಣ ಇಲ್ಲದೆ ಅವಧಿಗೂ ಮೊದಲು ವರ್ಗಾವಣೆಗೆ ಅವಕಾಶ ಇಲ್ಲ. ಅಂಗವಿಕಲರಿಗೆ ನೀಡುವ ವಿನಾಯಿತಿಗಳನ್ನು ಅನುಸರಿಸಬೇಕು. ವರ್ಗಾವಣೆ ಆದೇಶದಲ್ಲಿ ಹುದ್ದೆಯನ್ನು ತೋರಿಸದಿರುವುದು, ಸಾಮಾನ್ಯ ವರ್ಗಾವಣೆ ಮುಗಿದ ಬಳಿಕ ಮುಖ್ಯಮಂತ್ರಿಯ ಅನುಮೋದನೆ ಪಡೆಯದೆ ವರ್ಗಾವಣೆ ಆದೇಶ ಹೊರಡಿಸುವುದು ಸೇರಿದಂತೆ ಮಾರ್ಗಸೂಚಿಯಲ್ಲಿರುವ ಅಂಶಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
https://twitter.com/KarnatakaVarthe/status/1927286531850420472
