HomeLatest NewsBIG NEWS: ದೇಶದಲ್ಲೇ ಮೊದಲಿಗೆ ಇಂದು ಬಡವರಿಗೆ ದಾಖಲೆಯ 42,345 ಮನೆಗಳ ಒಟ್ಟಿಗೆ ಹಸ್ತಾಂತರ

BIG NEWS: ದೇಶದಲ್ಲೇ ಮೊದಲಿಗೆ ಇಂದು ಬಡವರಿಗೆ ದಾಖಲೆಯ 42,345 ಮನೆಗಳ ಒಟ್ಟಿಗೆ ಹಸ್ತಾಂತರ

ಹುಬ್ಬಳ್ಳಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ನಿರ್ಮಿಸಿದ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.

ಬಡವರಿಗೆ ಇಂದು ದಾಖಲೆಯ 42,345 ಮನೆಗಳನ್ನು ಹಸ್ತಾಂತರ ಮಾಡಲಾಗುವುದು. ಒಟ್ಟಿಗೆ ಇಷ್ಟು ಮನೆಗಳ ಹಸ್ತಾಂತರ ದೇಶದಲ್ಲೇ ಮೊದಲಾಗಿದೆ. ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟ ಸಹೋದ್ಯೋಗಿಗಳು, ಶಾಸಕರು, ಜನಪ್ರತಿನಿಧಿಗಳು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

2016 -17 ರಲ್ಲಿ ಮಂಜೂರಾದ 1,80,253 ಮನೆಗಳ ಪೈಕಿ ಮೊದಲ ಹಂತದಲ್ಲಿ ಕಳೆದ ವರ್ಷ 36,789 ಮನೆಗಳನ್ನು ಹಸ್ತಾಂತರ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 42,345 ಮನೆಗಳ ಹಸ್ತಾಂತರ ಮಾಡಲಾಗುವುದು. ಇನ್ನೆರಡು ತಿಂಗಳಲ್ಲಿ ಮತ್ತೆ 30,000 ಮನೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

20,312 ಮನೆಗಳನ್ನು ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ವಿತರಿಸಲಾಗುವುದು. 22,003 ಮನೆಗಳನ್ನು ಇತರೆ ವರ್ಗದವರಿಗೆ ಹಂಚಿಕೆ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular