HomeKarnatakaBIG NEWS: ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

BIG NEWS: ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜಕೀಯ ಜಂಜಾಟದ ನಡುವೆ ವಿಶ್ರಾಂತಿಗಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಬೆನ್ನಲ್ಲೇ ಕುಮಾರಸ್ವಾಮಿ ಕುಟುಂಬ ಸಮೇತ ವಿದೇಶಕ್ಕೆ ತೆರಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನೈಸ್ ಯೋಜನೆ ಅಕ್ರಮ ಆರೋಪ ಮಾಡಿರುವ ಕುಮಾರಸ್ವಾಮಿ, ವಿಪಕ್ಷ ಬಿಜೆಪಿ ಜೊತೆಗೂಡಿ ಒಗ್ಗಟ್ಟಿನ ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ. ಅಲ್ಲದೇ ನೈಸ್ ಯೋಜನೆ ವಿಚಾರವಾಗಿ ನ್ಯಾಯ ಕೊಡಿಸುವಂತೆ ಸರಣಿ ಟ್ವೀಟ್ ಮೂಲಕ ಸರ್ಕಾರವನ್ನು ಆಗ್ರಹಿಸಿರುವ ಕುಮಾರಸ್ವಾಮಿ ಈ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಬಗ್ಗೆ ಬಿಜೆಪಿ ಜೊತೆ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ ವಿಶ್ರಾಂತಿಗಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿರುವ ಹೆಚ್.ಡಿ. ಕುಮಾರಸ್ವಾಮಿ, ಒಂದು ವಾರ ಕಾಲ ಮಲೇಷಿಯಾದಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular