BIG NEWS : ಅತ್ತಿಬೆಲೆ ಪಟಾಕಿ ದುರಂತಕ್ಕೆ ಮಾಜಿ ಸಿಎಂ HDK ಸಂತಾಪ, ಉನ್ನತ ಮಟ್ಟದ ತನಿಖೆಗೆ ಆಗ್ರಹ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ( H.D Kumaraswamy ) ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ. ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ.

ಈ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು ಎಂದು ಹೇಳಿದ್ದಾರೆ.

https://twitter.com/hd_kumaraswamy/status/1710852695710650457

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read