ಬೆಂಗಳೂರು : ಬೆಂಗಳೂರಿಗೂ ಗಾಂಜಾ ಚಾಕೊಲೇಟ್ ಮಾರಾಟ ಜಾಲ ಕಾಲಿಟ್ಟಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಉತ್ತರ ಪ್ರದೇಶದಿಂದ ತಂದು ಬೆಂಗಳೂರಿಗೆ ಗಾಂಜಾ ಚಾಕ್ಲೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆರ್ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ್ದರು. ಈ ಸಂಬಂಧ ಆರ್ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮಹಾಕಾಲ್, ಆನಂದ್, ಚಾರ್ಮಿನಾರ್ ಚಾಕ್ ಲೇಟ್ ಹೆಸರಿನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿತ್ತು.
ಈ ಸಂಬಂಧ ಶಮೀಮ್ ಅಖ್ತರ್ ಎಂಬಾತನನ್ನು ಬಂಧಿಸಿದ್ದು, 6 ಲಕ್ಷ ಮೌಲ್ಯದ ಚಾಕೊಲೇಟ್ ವಶಪಡಿಸಿಕೊಳ್ಳಲಾಗಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.