ಬೆಂಗಳೂರು : ರಾಜ್ಯದಲ್ಲಿ 2030 ರೊಳಗೆ 66 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್’ಲೈನ್ ಸಂಪರ್ಕ ನೀಡಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಸಚಿವ ಎಂಬಿ ಪಾಟೀಲ್ ಉತ್ತರಿಸಿದ್ದಾರೆ
2015 ರಲ್ಲಿ ಈ ಯೋಜನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಭಾರತೀಯ ಅನಿಲ ಪ್ರಾಧಿಕಾರ (ಗೈಲ್) ಇದರ ಕಾಮಗಾರಿಯನ್ನು ಕೈಗೆತ್ತಿಕೊಂಡಿತು. 2023ರವರೆಗೆ 4.07 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಸಂಪರ್ಕ ಕೊಟ್ಟಿದ್ದು, 320 ಸಿಎನ್ ಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಯೋಜನೆಯಲ್ಲಿ ಇದುವರೆಗೂ ಒಟ್ಟು 5.10 ಲಕ್ಷ ಮನೆಗಳಿಗೆ ಸೌಲಭ್ಯ ಸಿಕ್ಕಿದ್ದು, 474 ಸಿಎನ್ಜಿ ಕೇಂದ್ರಗಳು ಕಾರ್ಯಾರಂಭ ಮಾಡಿವೆ ರಾಜ್ಯದಲ್ಲಿ 2030 ರೊಳಗೆ 66 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್’ಲೈನ್ ಸಂಪರ್ಕ ನೀಡಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.