BIG NEWS : ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ ಪಾವತಿಗೆ ಅನುದಾನ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಗೆ ಅನುದಾನ ಬಿಡುಗಡೆ ಮಾಡಿದೆ.

2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ-2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಫೆಬ್ರವರಿ-2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿರುತ್ತಾರೆ. ಅದರಂತೆ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು 2202-03-103-2-01 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 324 ಅತಿಥಿ ಉಪನ್ಯಾಸಕರ ಗೌರವಧನ ರಡಿಯಲ್ಲಿ ಫೆಬ್ರವರಿ-2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ರೂ.2,37,417/- (ಎರಡು ಲಕ್ಷದ ಮೂವತ್ತೇಳು ಸಾವಿರದ ನಾಲ್ಕು ನೂರು ಹದಿನೇಳು ಮಾತ್ರ) ಗಳನ್ನು ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿರುವ ವಿವರಗಳಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read