BIG NEWS : ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಗುಡ್ ನ್ಯೂಸ್ : ‘ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಮರು ಜಾರಿ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿಗೆ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು ಕುರಿಗಾಹಿಗಳಿಗೆ ಆರ್ಥಿಕ ನೆರವು ಒದಗಿಸಲು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು 2023-24ರಲ್ಲಿ ಜಾರಿಗೊಳಿಸಲಾಗಿತ್ತು.

ಪ್ರಸಕ್ತ ಸಾಲಿನವರೆಗೆ 7,806 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದು, ಯೋಜನೆಯ ಮರುಚಾಲನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ. ವೆಂಕಟೇಶ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read