BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ನಾಳೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.27 ರಂದು ನಾಳೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ ಹೊರಡಿಸಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು 2:27.08.20240 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ.ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು/ಆಡಳಿತ ಮಂಡಳಿಯು ಖಾತರಿ ಪಡಿಸುವುದು.

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಪದವಿಪೂರ್ವ ಇಲಾಖೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಈ ಆದೇಶವನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡುವುದು. ಮುಂದುವರೆದು, ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸದರಿ ಪರೀಕ್ಷೆಯನ್ನು ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read