BIG NEWS : ರಾಜ್ಯದ ‘ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಹಣದ ಬದಲು ‘ಅಕ್ಕಿ’ ವಿತರಣೆಗೆ ಸರ್ಕಾರ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ವಿತರಣೆಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ. ಆಹಾರ ಧಾನ್ಯದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ. ಅಕ್ಕಿಯ ಅಲಭ್ಯತೆಯಿಂದಾಗಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ ರೂ.34/-ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ರೂ.170/- ರಂತೆ ಹಣವನ್ನು ವರ್ಗಾಯಿಸಲಾಗುತ್ತಿದೆ.

ಮೇಲೆ ಓದಲಾದ (2)ರ ಆಯುಕ್ತರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರು ಪ್ರಸ್ತಾವನೆ ಸಲ್ಲಿಸಿ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ದಿನಾಂಕ:17.01.2025ರ ಪತ್ರದಲಿ, ಭಾರತ ಆಹಾರ ನಿಗಮದ OMSS(D) ಯೋಜನೆಯಡಿ ರಾಜ್ಯಗಳಿಗೆ ಮಾರಾಟ ಮಾಡಲಾಗುವ ಅಕ್ಕಿ ದರವನ್ನು ಪ್ರತಿ ಕ್ವಿಂಟಾಲ್ಗೆ ರೂ.2250/- ರಂತೆ (ಸಾಗಾಣಿಕೆ ದರ ಸೇರಿದಂತೆ) -ಹರಾಜು ಹೊರತುಪಡಿಸಿ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ಕಲ್ಪಿಸಿ ಸದರಿ ದರ ದಿನಾಂಕ:30.06.2025ರ ವರೆಗೆ ದಿನಾಂಕ:30.06.2025ರ ವರೆಗೆ ಅನ್ವಯಿಸುವುದಾಗಿ ತಿಳಿಸಿ ವಾರ್ಷಿಕ ಒಟ್ಟು 12 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಖರೀದಿಸಲು ಮಿತಿಯನ್ನು ನಿಗದಿಪಡಿಸಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಪಡಿತರ ಚೀಟಿಗಳ (PHH) ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರುವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ ಅನಾಸ 84 ಡಿಆರ್ಎ 2023, ದಿನಾಂಕ: 06.07.2023 ರ ಮಾರ್ಗಸೂಚಿಗಳನ್ವಯ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಿದೆ.ಅನ್ನಭಾಗ್ಯ ಯೋಜನೆಯನ್ನು (ಗ್ಯಾರಂಟಿ) ಅನುಷ್ಠಾನಗೊಳಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ,ಸದರಿ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ FD 111 Exp-5/2025, ದಿನಾಂಕ:18.02.2025, ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read