ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ನಗರ ಪಾಲಿಕೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮೇ ಅಥವಾ ಜೂನ್ ಅಂತ್ಯದೊಳಗೆ ಬ್ಯಾಲೆಟ್ ಪೇಪರ್(ಮತಪತ್ರ) ಮೂಲಕ ನಡೆಸಲಾಗುವುದು.
ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಯ 369 ವಾರ್ಡ್ ಗಳ ಕರಡು ಮತದಾರರ ಪಟ್ಟಿ ಪ್ರಕಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು ಹಾಗೂ ಜಿಬಿಎ 5 ನಗರ ಪಾಲಿಕೆ ಚುನಾವಣೆಯನ್ನು ಮತಪತ್ರದ ಮೂಲಕ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಜಿಬಿಎ ಕಾಯ್ದೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಅವಕಾಶವಿದೆ. ಕಾಯ್ದೆಯಲ್ಲಿ ಅವಕಾಶ ಇರುವಾಗ ಬಳಕೆ ಮಾಡಲು ಯಾವುದೇ ಅಡ್ಡಿ ಇಲ್ಲ. ಸುಪ್ರೀಂಕೋರ್ಟ್ ನ ಯಾವುದೇ ತೀರ್ಪಿನಲ್ಲಿ ಅಥವಾ ದೇಶದ ಯಾವುದೇ ಕಾನೂನಿನಲ್ಲಿ ಬ್ಯಾಲೆಟ್ ಪೇಪರ್ ಬಳಕೆ ನಿಷೇಧಿಸಲಾಗಿದೆ ಎನ್ನುವ ಪ್ರಸ್ತಾಪ ಇಲ್ಲ. ನಿಯಮಗಳ ಚೌಕಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

