HomeLatest NewsBIG NEWS: ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಿಬಿಲ್ ಸ್ಕೋರ್ ಬೇಕಿಲ್ಲ

BIG NEWS: ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಿಬಿಲ್ ಸ್ಕೋರ್ ಬೇಕಿಲ್ಲ

ನವದೆಹಲಿ: ಕನಿಷ್ಠ ಸಿಬಿಲ್ ಸ್ಕೋರf ಇಲ್ಲವೆನ್ನುವ ಒಂದೇ ಕಾರಣಕ್ಕೆ ಮೊದಲ ಸಲ ಸಾಲಕ್ಕೆ ಅರ್ಜಿ ಸಲ್ಲಿಸಿದವರಿಗೆ ಬ್ಯಾಂಕುಗಳು ಸಾಲ ನಿರಾಕರಿಸುವಂತಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.

ಲೋಕಸಭೆಯಲ್ಲಿ ಈ ಬಗ್ಗೆ ಉತ್ತರ ನೀಡಿದ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್ ಚೌಧರಿ ಅವರು, ಹೊಸ ಸಾಲಗಾರರ ಅರ್ಜಿಗಳನ್ನು ಹಿಂದಿನ ಸಾಲ ಇತಿಹಾಸವಿಲ್ಲ ಎನ್ನುವ ಕಾರಣಕ್ಕೆ ತಿರಸ್ಕರಿಸುವಂತಿಲ್ಲವೆಂದು ಆರ್ಬಿಐ ಈಗಾಗಲೇ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ಮೊದಲ ಸಲ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ಇಂತಿಷ್ಟೇ ಇರಬೇಕು ಎಂದು ಆರ್ಬಿಐ ನಿಗದಿ ಮಾಡಿಲ್ಲ. ಸಾಲ ನೀಡುವ ಹಣಕಾಸು ಸಂಸ್ಥೆಗಳು ಅನುಮೋದಿತ ನೀತಿಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ತಮ್ಮ ನಿರ್ಧಾರ ಕೈಗೊಳ್ಳುತ್ತವೆ. ಕ್ರೆಡಿಟ್ ಮಾಹಿತಿ ವರದಿ ಅಂಶಗಳಲ್ಲಿ ಒಂದು ಅಂಶ ಮಾತ್ರವೆಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular