ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಗುಡ್ ಬೈ ಹೇಳಲಾಗಿದ್ದು, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಸ್ತಿತ್ವಕ್ಕೆ ಬರಲಿದೆ.
ಬಿಬಿಎಂಪಿ ಕೇಂದ್ರ ಕಚೇರಿ ಇನ್ನು ಮುಂದೆ ಜಿಬಿಎ ಕೇಂದ್ರ ಕಚೇರಿಯಾಗಿ ಕಾರ್ಯನಿರ್ವಹಿಸಲಿದೆ. ಜಿಬಿಎ ಅಡಿಯಲ್ಲಿ 5 ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರತಿ ಪಾಲಿಕೆಗೆ ಎರಡು ವಲಯಗಳಂತೆ 10 ವಲಯಗಳನ್ನು ರಚಿಸಲಾಗಿದೆ. ಪ್ರತಿ ಪಾಲಿಕೆಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ ಮಾಡಲಾಗಿದೆ. ಒಂದೇ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳು ಬೇರೆ ಬೇರೆ ಪಾಲಿಕೆ ವ್ಯಾಪ್ತಿಗೆ ಸೇರಿವೆ.
ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿ, ಡಿಸಿಎಂ ಡಿಕೆ ಶಿವಕುಮಾರ್ ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಒಟ್ಟು 73 ಜನ ಪದ ನಿಮಿತ್ತ ಸದಸ್ಯರು ಇರುತ್ತಾರೆ. ಬೆಂಗಳೂರಿನ ಮೂವರು ಸಂಸದರನ್ನು ಸದಸ್ಯರಾಗಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು ವ್ಯಾಪ್ತಿಯ ಶಾಸಕರು ಕೂಡ ಜಿಬಿಎ ಸದಸ್ಯರಾಗಿರುತ್ತಾರೆ.
ಬೆಂಗಳೂರು ನಗರ ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ, ಬೆಂಗಳೂರು ಪಶ್ಚಿಮ ನಗರಪಾಲಿಕೆ ಸೇರಿ 5 ಪಾಲಿಕೆ ರಚನೆ ಮಾಡಲಾಗಿದ್ದು, ಸದ್ಯ ಇರುವ ವಾರ್ಡ್ ಗಳೇ ಜಿಬಿಎ ನಲ್ಲೂ ಮುಂದುವರೆಯಲಿವೆ.