ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸುವುದಾಗಿ ಹೇಳುತ್ತಿದ್ದ ಸರ್ಕಾರ ಈಗ ಎಲ್ಲರ ಮನೆಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಸುವ ಚಿಂತನೆ ನಡೆಸಿದೆ.
ಈ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ದಿನಗಳಲ್ಲಿ ಸಚಿವ ಸಂಪುಟದ ಮುಂದಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರೀಮ್ಯಾಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ(RDSS) ಯೋಜನೆಯನ್ನು ಕೇಂದ್ರ ಸರ್ಕಾರ ಎರಡು ವರ್ಷ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಂತ ಹಂತವಾಗಿ ಯೋಜನೆ ಅನುಷ್ಠಾನಕ್ಕೆ ಉದ್ದೇಶಿಸಲಾಗಿದೆ. ಯೋಜನೆ ಕುರಿತಾಗಿ ಸಂಪುಟ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.