BIG NEWS : ಸರ್ಕಾರಿ ನೌಕರರೇ ಗಮನಿಸಿ : ಸೇವಾ ವಹಿಯನ್ನು ʻESRʼ ನಲ್ಲಿ ಅನುಷ್ಠಾನಕ್ಕೆ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ / ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಲಾಗಿದೆ.

ಪ್ರಸ್ತಾಪಿತ ವಿಷಯಕ್ಕೆ ಸಂಬಂಧಿಸಿದಂತೆ. ಕರ್ನಾಟಕ ರಾಜ್ಯ ಸರ್ಕಾರದ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಹಾಗೂ 2021-22ನೇ ಸಾಲಿನಿಂದ ನೇಮಕಗೊಳ್ಳುವ ಎಲ್ಲಾ ಸರ್ಕಾರಿ ಅಧಿಕಾರಿ / ನೌಕರರ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್-2.0 ಯೋಜನೆಯ ಭಾಗವಾದ ವಿದ್ಯುನ್ಮಾನ ಸೇವಾ ವಹಿ (Electronic Service Register – ESR) ಅನುಷ್ಠಾನಗೊಳಿಸಲು ಹಾಗೂ ಇದರ ಭಾಗವಾಗಿ ಪ್ರಸ್ತುತ ಹೆಚ್.ಆರ್.ಎಂ.ಎಸ್-1 ತಂತ್ರಾಂಶದಲ್ಲಿ ಲಭ್ಯವಿರುವ ಸರ್ಕಾರಿ ಅಧಿಕಾರಿ / ನೌಕರರ ಸೇವಾ ವಿವರಗಳನ್ನು ESR ಗೆ ವರ್ಗಾಯಿಸಲು ಸರ್ಕಾರದ ಹಂತದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು. ಸದರಿ ಮಾಹಿತಿಗಳನ್ನು ESR ಗೆ ವರ್ಗಾಯಿಸಿದ ನಂತರ ಯಾವುದೇ ತಿದ್ದುಪಡಿ ಮಾಡಲು ಅವಕಾಶವಿಲ್ಲದಿರುವ ಕಾರಣ ಹೆಚ್.ಆರ್.ಎಂ.ಎಸ್-1 ತಂತ್ರಾಂಶದಲ್ಲಿ ಲಭ್ಯವಿರುವ ತಮ್ಮ ಕಛೇರಿ / ಕಾಲೇಜಿನ ಎಲ್ಲಾ ಸರ್ಕಾರಿ ಅಧಿಕಾರಿ / ನೌಕರರುಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಈ ಕೂಡಲೇ ಪರಿಶೀಲಿಸಿ, ಅವಶ್ಯಕವಿದ್ದಲ್ಲಿ ಸರಿಪಡಿಸುವಂತೆ ಈಗಾಗಲೇ ಉಲ್ಲೇಖ(2)ರ ಸುತ್ತೋಲೆಯಲ್ಲಿ ಸೂಚಿಸಲಾಗಿರುತ್ತದೆ.

ತತ್ಸಂಬಂಧ. ಹೆಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಇದುವರೆವಿಗೂ ಸರಿಪಡಿಸಿಕೊಳ್ಳದ ಅಪೂರ್ಣ ಮಾಹಿತಿಗಳದ್ದಲ್ಲ. ಎಲ್ಲಾ ಡಿ.ಡಿ.ಓ ಗಳು ಈ ಬಗ್ಗೆ ವೈಯಕ್ತಿಕ ಗಮನ ಹರಿಸಿ ತಮ್ಮ ಕಛೇರಿಯ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರುಗಳ ವೈಯಕ್ತಿಕ ಮಾಹಿತಿ. ಸೇವಾ ವಹಿ ಹಾಗೂ ಇತರೇ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿ. ತಪ್ಪಿದಲ್ಲಿ ಸರಿಪಡಿಸಿಕೊಂಡು ಸದರಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read