HomeLatest NewsBIG NEWS: ಕನ್ನಡ ಚಲನಚಿತ್ರಗಳ ಒಟಿಟಿ ವೇದಿಕೆ ರಚನೆಗೆ ಸರ್ಕಾರದಿಂದ ಸಮಿತಿ ರಚನೆ

BIG NEWS: ಕನ್ನಡ ಚಲನಚಿತ್ರಗಳ ಒಟಿಟಿ ವೇದಿಕೆ ರಚನೆಗೆ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ “ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಜಿಸಲು ಕ್ರಮ ಕೈಗೊಳ್ಳಲಾಗಿದ್ದು, ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಲಾಗಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -443 ರಲ್ಲಿನ ಘೋಷಣೆಯನ್ವಯ, ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಜಿಸಲು ಪೂರಕವಾಗಿ ಅಗತ್ಯ ಮಾಹಿತಿಯನ್ನು ಪಡೆದು ಯೋಜನೆಯ ರೂಪುರೇಷೆಗಳನ್ನು ರಚಿಸಲು ಅನುವಾಗುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಮತ್ತು ಶ್ರೀ ಕಂಠೀರವ ಸ್ಟುಡಿಯೋದ ಅಧ್ಯಕ್ಷರನ್ನೊಳಗೊಂಡಂತೆ ನುರಿತ ತಜ್ಞರು/ತಾಂತ್ರಿಕ ಪರಿಣಿತರ ನಿಯೋಗವೊಂದನ್ನು ರಚಿಸಿ ಸಮಗ್ರ ಅಧ್ಯಯನ ಕೈಗೊಂಡು ಸರ್ಕಾರಕ್ಕೆ ವರದಿ ಪಡೆಯಲು ಅಗತ್ಯವಾದ ಅನುದಾನಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -443 ರಲ್ಲಿನ ಘೋಷಣೆಯನ್ವಯ, ಕನ್ನಡ ಚಲನ ಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಜಿಸಲು ಪೂರಕವಾಗಿ ರೂಪುರೇಷೆಗಳನ್ನು ರಚಿಸಲು ಅಗತ್ಯ ಮಾಹಿತಿ ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸಲು ಈ ಕೆಳಕಂಡಂತೆ ವಿಷಯ ತಜ್ಞರು/ತಾಂತ್ರಿಕ ಪರಿಣಿತರನ್ನೊಳಗೊಂಡ ನಿಯೋಗವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧ್ಯಕ್ಷರು

ಮೆಹಬೂಬ್ ಪಾಷಾ, ಅಧ್ಯಕ್ಷರು, ಶ್ರೀ ಕಂಠೀರವ ಸ್ಟುಡಿಯೋ ಲಿ., ಬೆಂಗಳೂರು

ಸದಸ್ಯರು

ಸಾಧುಕೋಕಿಲ, ಅಧ್ಯಕ್ಷರು ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

ಕೆ.ಪಿ.ಶ್ರೀಕಾಂತ್, ಚಲನಚಿತ್ರ ನಿರ್ಮಾಪಕರು, ಬೆಂಗಳೂರು

ರಾಕ್‌ಲೈನ್ ವೆಂಕಟೇಶ್, ಚಲನಚಿತ್ರ ನಿರ್ಮಾಪಕರು/ವಿತರಕರು, ಬೆಂಗಳೂರು

ದುನಿಯಾ ವಿಜಯ್, ಚಲನಚಿತ್ರ ನಟರು, ಬೆಂಗಳೂರು

ಐವಾನ್ ಡಿಸಿಲ್ವ, ಸದಸ್ಯರು, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

ದೇಶಾದ್ರಿ ಹೆಚ್. ಸದಸ್ಯರು, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

ಜಂಟಿ ನಿರ್ದೇಶಕರು(ಛಾಯಾಚಿತ್ರ ಮತ್ತು ಚಲನಚಿತ್ರ ಶಾಖೆ)

ಸದಸ್ಯ ಕಾರ್ಯದರ್ಶಿ

ರಿಜಿಸ್ಟ್ರಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular