HomeLatest NewsBIG NEWS: ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆ ಸೌಲಭ್ಯ ಕಲ್ಪಿಸಲು...

BIG NEWS: ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆ ಸೌಲಭ್ಯ ಕಲ್ಪಿಸಲು ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜಾ ಸೌಲಭ್ಯವನ್ನು ಕಲ್ಪಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ.

ಪ್ರಸ್ತಾವನೆ:

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಓದಲಾದ ಸರ್ಕಾರಿ ಆದೇಶದಲ್ಲಿ ಮಂಜೂರು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ

ಸರ್ಕಾರವು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಕೆಳಕಂಡ ಷರತ್ತುಗಳಿಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶಿಸಿದೆ:

1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.

2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.

4. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular