HomeKarnatakaBIG NEWS : ನಾಳೆ ರಾಜ್ಯ ಸರ್ಕಾರದ ʻ5 ನೇ ಗ್ಯಾರಂಟಿʼ ಯೋಜನೆಗೆ ಚಾಲನೆ :...

BIG NEWS : ನಾಳೆ ರಾಜ್ಯ ಸರ್ಕಾರದ ʻ5 ನೇ ಗ್ಯಾರಂಟಿʼ ಯೋಜನೆಗೆ ಚಾಲನೆ : ʻಯುವನಿಧಿʼ ಫಲಾನುಭವಿಗಳ ಖಾತೆಗೆ ಹಣ ಜಮಾ

 

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದು, ಫಲಾನುಭವಿಗಳಿಗೆ ಖಾತೆಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆ ಜಮಾ ಆಗಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಶರಣ ಪ್ರಕಾಶ್ ಪಾಟೀಲ,  2023 ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ 2 ವರ್ಷಗಳವರೆಗೆ ನಿರುದ್ಯೊಗ ಭತ್ಯೆ ನೀಡಲಾಗುವುದು. ಹಾಗೂ ಸ್ಕಿಲ್ ಕನೆಕ್ಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ತರಬೇತಿಯನ್ನು ನೀಡಲಾಗುವುದು. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆಯಾಗಿದ್ದು ಉದ್ಯೋಗವನ್ನು ಒದಗಿಸಲು ಸಹಕರಿಸುವುದು ಮತ್ತು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ 61,700 ಪದವಿ/ಡಿಪ್ಲೊಮಾ ಹೊಂದಿದ ಅಭ್ಯರ್ಥಿಗಳು ಈ ಯೋಜನೆಯಡಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2022-23 ರಲ್ಲಿ ಒಟ್ಟು 5.29 ಲಕ್ಷ ವಿದ್ಯಾರ್ಥಿಗಳು ಪದವಿ/ಡಿಪ್ಲೊಮಾ ಮುಗಿಸಿದ್ದಾರೆ. ವಿದ್ಯಾಭ್ಯಾಸ ಮುಗಿದು ಆರು ತಿಂಗಳಾದರೂ ಉದ್ಯೋಗ ಸಿಗದವರು ಫಲಾನುಭವಿಗಳಾಗಲು ಅರ್ಹರಿದ್ದಾರೆ. ನೋಂದಣಿ ಪ್ರಕ್ರಿಯೆ ಆನ್‍ಲೈನ್‍ನಲ್ಲಿ ಉಚಿತ ಮತ್ತು ಸರಳವಾಗಿದೆ ಎಂದರು.

ಕಲಿಕೆ ಜೊತೆಗೆ ಕೌಶಲ್ಯಾಭಿವೃದ್ದಿ ಇಲಾಖೆ ಮೂಲಕ ಕೌಶಲ್ಯವನ್ನು ಕಲಿಸಲಾಗುತ್ತಿದ್ದು ಸರ್ಕಾರ ಯುವಜನತೆಗೆ ನಿರುದ್ಯೋಗ ಸಮಸ್ಯೆ ಎದುರಿಸಲು ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಇದರ ಸದುಪಯೋಗ ಪಡೆಯಬೇಕೆಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿ, ಪದವಿ/ಡಿಪ್ಲೊಮಾ ಉತ್ತೀರ್ಣರಾದ ನಂತರ ಆರು ತಿಂಗಳಲ್ಲಿ ಉದ್ಯೋಗ ದೊರೆಯದಿದ್ದವರು ಈ ಯೋಜನೆಯ ಫಲಾನುಭವಿಗಳಾಗುತ್ತಾರೆ. ಪದವಿ ಮುಗಿದ ನಂತರ ಮುಂದೇನು ಮಾಡುವುದು ಎಂಬ ಯೋಚನೆ ಜೊತೆಗೆ ಆರ್ಥಿಕ ಒತ್ತಡವೂ ಇರುತ್ತದೆ. ಉದ್ಯೋಗ ಹುಡುಕಲು, ಅರ್ಜಿಗಳನ್ನು ಹಾಕಲು ಯುವನಿಧಿ ನಿರುದ್ಯೋಗ ಭತ್ಯೆ ಸಹಾಯ ಮಾಡುವುದರೊಂದಿಗೆ ಒಂದು ವಿಶ್ವಾಸ ಮತ್ತು ಭರವಸೆಯನ್ನು ಯುವಜನತೆಯಲ್ಲಿ ತುಂಬಲಿದೆ.

ಯುವನಿಧಿ ಯೋಜನೆ ಅನುಷ್ಟಾನದ ಕುರಿತಾದ ವ್ಯವಸ್ಥೆಗಳು ಉತ್ತಮವಾಗಿ ನಡೆಯುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಾದ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಕಾರವಾರ, ಚಿತ್ರದುರ್ಗದಿಂದ ಸಹ ಯುಜನತೆ ಆಗಮಿಸಲಿದ್ದು 1.5 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಸಾಗಿವೆ. ಗೃಹಜ್ಯೋತಿ ಸುಮಾರು ಶೇ.90 ರಷ್ಟು, ಗೃಹಲಕ್ಷ್ಮಿ ಶೇ.93 ರಷ್ಟು, ಅನ್ನಭಾಗ್ಯ ಶೇ.96 ರಷ್ಟು ಬಳಕೆಯಾಗುತ್ತಿದ್ದು, ಶಕ್ತಿ ಯೋಜನೆ ಮುಖಾಂತರ 200 ಕೋಟಿ ಮಹಿಳೆಯರು ಕಳೆದ 5 ತಿಂಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಒಂದು ಗ್ರಾಮ ಪಂಚಾಯಿತಿಗೆ ಈ ಯೋಜನೆಗಳಿಂದ ಒಂದು ತಿಂಗಳಿಗೆ ಸುಮಾರು 75 ಲಕ್ಷದವರೆಗೆ ಅನುದಾನ ಲಭ್ಯವಾಗುತ್ತಿದೆ. ಹಾಗೂ ವರ್ಷಕ್ಕೆ ರೂ.8 ಕೋಟಿ ಕುಟುಂಬಗಳಿಗೆ ಸರಾಸರಿ ರೂ.5000 ಭತ್ಯೆ ದೊರೆಯುತ್ತಿದ್ದು ಸಾಮಾನ್ಯ ಜನರಿಗೆ ಅನುಕೂಲವಾಗುತ್ತಿದೆ.

ಕಷ್ಟದಲ್ಲಿರುವವರಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೂ ಇತರೆ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳುತ್ತಲಿದೆ ಎಂದರು.

ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥನ್‍ಕುಮಾರ್ ಕಾರ್ಯಕ್ರಮಕ್ಕೆ ತೆರಳಬೇಕಾದ ಮಾರ್ಗ ವ್ಯವಸ್ಥೆ, ವಾಹನ ಸಂಚಾರ ವ್ಯವಸ್ಥೆ, ವಾಹನ ನಿಲುಗಡೆ, ಇತರೆ ಕುರಿತು ಮಾಹಿತಿ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular