HomeKarnatakaBIG NEWS: ಮರ್ಯಾದೆಗೇಡು ಹತ್ಯೆ ನಿಷೇಧ ಸೇರಿ 10 ಮಸೂದೆಗೆ ರಾಜ್ಯಪಾಲರ ಅಂಕಿತ

BIG NEWS: ಮರ್ಯಾದೆಗೇಡು ಹತ್ಯೆ ನಿಷೇಧ ಸೇರಿ 10 ಮಸೂದೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ 11 ವಿಧೇಯಕಗಳ ಪೈಕಿ ಮರ್ಯಾದೆಗೇಡು ಹತ್ಯೆ ತಡೆಯುವ ಉದ್ದೇಶದ ‘ಇವ ನಮ್ಮವ ಇವ ನಮ್ಮವ’ ಮಸೂದೆ ಸೇರಿದಂತೆ 10 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಅಧಿಕೃತ ರಾಜ್ಯ ಪತ್ರ ಪ್ರಕಟಿಸಲಾಗಿದೆ.

ಶಿಕ್ಷಕರ ವರ್ಗಾವಣೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಆದ್ಯತೆ ನೀಡುವ ಮಸೂದೆ, ಕರ್ನಾಟಕ ಪೊಲೀಸ್ ಮಸೂದೆ, ಮುನ್ಸಿಪಾಲಿಟಿ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಗ್ರಾಪಂ, ತಾಪಂ, ಜಿಪಂಗಳು ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತ ಪತ್ರ ಬಳಕೆ ಕಡ್ಡಾಯಗೊಳಿಸುವ ಕರ್ನಾಟಕ ಸರ್ಕಾರದ 2026ರ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಹೊರತುಪಡಿಸಿ ಉಳಿದ ಹತ್ತು ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ ನಿಷೇಧ ಅಂತರ್ಜಾತಿ ಹಾಗೂ ಅಂತರ್ ಧರ್ಮೀಯ ವಿವಾಹಕ್ಕೆ ಅಡ್ಡಿ, ಸಂಪ್ರದಾಯಗಳ ಹೆಸರಲ್ಲಿ ಅಪರಾಧ ತಡೆಗಟ್ಟುವ ಸಲುವಾಗಿ ಬಜೆಟ್ ಅಧಿವೇಶನದಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಇವ ನಮ್ಮವ ಇವ ನಮ್ಮವ ಮಸೂದೆಗೆ ಅಂಕಿತ ಅಂಕಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ವಿವಾಹದಲ್ಲಿ ಆಯ್ಕೆ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಲ್ಲಿ ಅಪರಾಧಗಳ ತಡೆಗಟ್ಟುವಿಕೆ ಮತ್ತು ನಿಷೇಧ ವಿಧೇಯಕ 2026 ಅಸ್ತಿತ್ವಕ್ಕೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ವರ್ಗಾವಣೆ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಮಸೂದೆ, ಕರ್ನಾಟಕ ಪೊಲೀಸ್ ಮಸೂದೆ, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ಮಸೂದೆ, ಕರ್ನಾಟಕ ವೃತ್ತಿಗಳ, ಕಸಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಮಸೂದೆ, ಕರ್ನಾಟಕ ಸರ್ಕಾರ ಶೈಕ್ಷಣಿಕ ಸಂಸ್ಥೆಯ ಭೂಮಿ ರಕ್ಷಣೆ ಸಕ್ರಮಾತಿ ಮಸೂದೆ, ಕರ್ನಾಟಕ ಧನ ವಿನಿಯೋಗ ಮಸೂದೆ, ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ಮಸೂದೆಗಳು ಸೇರಿವೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular