HomeKarnatakaBIG NEWS: ಮತಪತ್ರಗಳ ಬಳಸಿ ಚುನಾವಣೆಗೆ ರಾಜ್ಯಪಾಲರ ಅಸ್ತು: ಸದನ ಅಂಗೀಕರಿಸಿದ್ದ ತಿದ್ದುಪಡಿ ಮಸೂದೆಗೆ ಅನುಮೋದನೆ

BIG NEWS: ಮತಪತ್ರಗಳ ಬಳಸಿ ಚುನಾವಣೆಗೆ ರಾಜ್ಯಪಾಲರ ಅಸ್ತು: ಸದನ ಅಂಗೀಕರಿಸಿದ್ದ ತಿದ್ದುಪಡಿ ಮಸೂದೆಗೆ ಅನುಮೋದನೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಯಂತ್ರಗಳ ಬದಲಿಗೆ ಮತಪತ್ರಗಳನ್ನು ಬಳಸಲು ಅವಕಾಶ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅನುಮೋದನೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದು ವಿರೋಧ ಪಕ್ಷಗಳ ವಿರೋಧದ ನಡುವೆಯೂ ವಿಧೇಯಕಕ್ಕೆ ಅನುಮೋದನೆ ಪಡೆದುಕೊಳ್ಳಲಾಗಿತ್ತು. ರಾಜ್ಯಪಾಲರು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪತ್ರ ಪ್ರಕಟಿಸಲಾಗಿದೆ.

ಸಂವಿಧಾನದ 326 ನೇ ವಿಧಿಯಂತೆ ಮುಕ್ತ ನ್ಯಾಯ ಸಮ್ಮತ ಮತ್ತು ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಯಬೇಕು. ಪ್ರಮುಖವಾಗಿ ಮತದಾರರ ಮತಪತ್ರ ಗೌಪ್ಯತೆ ಖಚಿತಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರ ಮೇಲೆ ದಬ್ಬಾಳಿಕೆ, ಬೆದರಿಕೆ, ಅನಗತ್ಯ ಪ್ರಭಾವ ಬೀರುವುದರರಿಂದ ರಕ್ಷಿಸುವುದನ್ನು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ. ಮತದಾರರ ಮೇಲೆ ದಬ್ಬಾಳಿಕೆ ಪ್ರಭಾವ ಬೀರುವವರ ವಿರುದ್ಧ ಕ್ರಮ ಕೈಗೊಳ್ಳುವ ಅಂಶವನ್ನು ಸೇರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವಿಎಂ ಕಾರ್ಯನಿರ್ವಹಣೆಯ ಕುರಿತು ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದ್ದು, ಚುನಾವಣೆ ಮೇಲೆ ನಂಬಿಕೆ ಮರು ಸ್ಥಾಪಿಸಲು ಸದೃಢ ರಹಸ್ಯ ಮತದಾನ ಪದ್ಧತಿಗೆ ಮರಳುವುದು ಅವಶ್ಯಕ ಎಂದು ತಿದ್ದುಪಡಿ ವಿಧೇಯಕದಲ್ಲಿ ತಿಳಿಸಲಾಗಿದೆ.

ಭಾರತೀಯ ಚುನಾವಣಾ ಆಯೋಗ ಸಿದ್ದಪಡಿಸಿದ ಮತದಾರರು ಪಟ್ಟಿ ಅಳವಡಿಸಿಕೊಳ್ಳುವ ಅಂಶವನ್ನು ವಿಧೇಯಕದಿಂದ ಕೈ ಬಿಡಲಾಗಿದೆ. ಜಿಲ್ಲಾ ಪಂಚಾಯಿತಿಯ ಪ್ರತಿ ಮತಕ್ಷೇತ್ರದಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣಕ್ಕೆ ಒಳಪಟ್ಟು ಉಪ ವಿಭಾಗಾಧಿಕಾರಿ ಮತದಾರರ ಪಟ್ಟಿ ಸಿದ್ದುಪಡಿಸಬೇಕು ಎಂದು ಹೇಳಲಾಗಿದೆ. ಇದುವರೆಗೆ ರಾಜ್ಯ ಚುನಾವಣಾ ಆಯುಕ್ತರ ನಿಗಾದಲ್ಲಿ ಮತದಾನ ಪಟ್ಟಿ ಸಿದ್ಧಪಡಿಸಲಾಗುತ್ತಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular