BIG NEWS : ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ʻಇ-ಆಫೀಸ್ʼ ಕಡ್ಡಾಯ ಅನುಷ್ಠಾನ : ಸರ್ಕಾರ ಆದೇಶ

ಬೆಂಗಳೂರು : ರಾಜ್ಎಯದ ಲ್ಲ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಕಡ್ಡಾಯವಾಗಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ತಂತ್ರಾಂಶದ ಮೂಲಕವೇ ಕಾಗದ ರಹಿತವಾಗಿ ಕಡತಗಳನ್ನು ನಿರ್ವಹಣೆ ಮಾಡಬೇಕು. ಹಾಗೂ  ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವ ಎಲ್ಲ ಪ್ರಸ್ತಾವನೆ/ಕಡತಗಳನ್ನು ಇ-ಆಫೀಸ್ ತಂತ್ರಾಂಶದಲ್ಲಿ ಕಾಗದ ರಹಿತವಾಗಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ ವಿಭಾಗ/ಜಿಲ್ಲಾ ಮಟ್ಟದ ಕಚೇರಿ ಹಾಗೂ ತಾಲ್ಲೂಕು ಮಟ್ಟದ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅಳವಡಿಸಲು ಅವರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಡಿಒ ಗಳನ್ನು ಹಾಗೂ ಮುಖ್ಯಸ್ಥರು/ಆಡಳಿತಾಧಿಕಾರಿ/ಮ್ಯಾನೇಜರ್‌ಗಳನ್ನು  ಇ-ಆಫೀಸ್ ಅನುಷ್ಠಾನಕ್ಕೆ ಸ್ಥಳೀಯ ನಿರ್ವಹಣಾ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿರುತ್ತದೆ.

ಪ್ರಸ್ತುತ ಇಡೀ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಕಾಗದ ರಹಿತವಾದ ಕಡತಗಳ ನಿರ್ವಹಣೆ ಮಾಡಲು ಸರ್ಕಾರ ಉದ್ದೇಶಿಸಿದೆ. ಅದರಂತೆ ಇ-ಆಫೀಸ್ ಕಡ್ಡಾಯ ಅನುಷ್ಠಾನಕ್ಕೆ ಇಲಾಖಾ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ  ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read