HomeKarnatakaBIG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ 'ಗ್ಯಾರಂಟಿ ಯೋಜನೆ'ಗಳು ನಿಲ್ಲಲ್ಲ : CM ಸಿದ್ದರಾಮಯ್ಯ...

BIG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳು ನಿಲ್ಲಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದು ಹೇಳಿದರು.

ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ.ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular