ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ನೇಮಕಗೊಂಡಿರುವ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಸಂಬಳ ಎಷ್ಟಿದೆ..? ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿರುವ ಗೌರವ ಸಂಭಾವನೆಯಲ್ಲಿ ಎಷ್ಟು ಹೆಚ್ಚಳ ಮಾಡಲಾಗಿದೆ . ಇಲ್ಲಿದೆ ಸಂಪೂರ್ಣ ಮಾಹಿತಿ.
ಸರ್ಕಾರದ ಆದೇಶ ಸಂಖ್ಯೆ ಇಪಿ 137 ಎಸ್‌ಎಸ್‌ಎಂ 2025, ದಿನಾಂಕ 15.05.2025ರಂತೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿರುವ ಗೌರವ ಸಂಭಾವನೆಯಲ್ಲಿ ಹೆಚ್ಚಳ ಮಾಡಲಾಗಿದೆ.
ಯಾರಿಗೆ ಎಷ್ಟು ಗೌರವ ಸಂಭಾವನೆ?
1. ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರು
-
ಹಾಲಿ ಗೌರವ ಸಂಭಾವನೆ: ₹10,000
-
ಹೆಚ್ಚಳ: ₹2,000
-
ಪರಿಷ್ಕೃತ ಒಟ್ಟು ಗೌರವ ಸಂಭಾವನೆ: ₹12,000
2. ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರು
-
ಹಾಲಿ ಗೌರವ ಸಂಭಾವನೆ: ₹10,500
-
ಹೆಚ್ಚಳ: ₹2,000
-
ಪರಿಷ್ಕೃತ ಒಟ್ಟು ಗೌರವ ಸಂಭಾವನೆ: ₹12,500
3. ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು
-
ಹಾಲಿ ಗೌರವ ಸಂಭಾವನೆ: ₹12,000
-
ಹೆಚ್ಚಳ: ₹2,000
-
ಪರಿಷ್ಕೃತ ಒಟ್ಟು ಗೌರವ ಸಂಭಾವನೆ: ₹14,000
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕ್ರಮ
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
📄 Official Documents / Supporting Documents

