HomeKarnatakaBIG NEWS : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಇನ್ಮುಂದೆ 'CM ಸಿದ್ದರಾಮಯ್ಯ' ಅನುಮೋದನೆ ಕಡ್ಡಾಯ...

BIG NEWS : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಇನ್ಮುಂದೆ ‘CM ಸಿದ್ದರಾಮಯ್ಯ’ ಅನುಮೋದನೆ ಕಡ್ಡಾಯ : ಸರ್ಕಾರ ಮಹತ್ವದ ಆದೇಶ |Govt Employee

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು, ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಷಯ: ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1. ಮೇಲಿನ ಉಲ್ಲೇಖಿತ ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ, ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 5ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡುವ ವರ್ಗಾವಣೆಗಳ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಸದರಿ ಕಂಡಿಕೆಯ ಉಪ ಕಂಡಿಕೆ (3) ರಲ್ಲಿ ಈ ಕೆಳಗಿನಂತೆ ತಿಳಿಸಲಾಗಿರುತ್ತದೆ.

5(3), ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕವೆನಿಸಿದ್ದಲ್ಲಿ ಇಂತಹ ಪ್ರಕರಣಗಳನ್ನು ಚಾಚುತಪ್ಪದೇ ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸಿ ಅವರ ಅನುಮೋದನೆಪಡೆದು ವರ್ಗಾವಣೆ ಮಾಡತಕ್ಕದ್ದು.

2. ಮೇಲಿನ ಉಲ್ಲೇಖಿತ ದಿನಾಂಕ: 25.06.2024, 10.07.2024 ಮತ್ತು 16.07.2024ರ ಸರ್ಕಾರಿ ಆದೇಶಗಳಲ್ಲಿ 2024 -25ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ: 25.06.2024 ರಿಂದ 31.07.2024 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿಆದೇಶಿಸಲಾಗಿದೆ. ಅಂದರೆ, ದಿನಾಂಕ: 31.07.2024 2024ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿಯು ಮುಕ್ತಾಯಗೊಂಡಿರುತ್ತದೆ. ಆದರೆ ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು ಜಾರಿಗೊಳಿಸಿ ನಂತರ ಘಟನೋತ್ರರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತಿದ್ದು, ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

3. ಈಗಾಗಲೇ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಸನ್ಮಾನ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯತಕ್ಕದೆಂದು ಈ ಮೂಲಕ ಸೂಚಿಸಿದೆ. ಒಂದು ವೇಳೆ ಪೂರ್ವಾನುಮೋದನೆಯನ್ನು ಪಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ / ವರ್ಗಾವಣೆ ಮಾಡಿ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಕಡತದಲ್ಲಿ ಸಲ್ಲಿಸಿದ್ದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಾ, ಸರ್ಕಾರದ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸತಕ್ಕದ್ದೆಂದು ಸ್ಪಷ್ಟಪಡಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular