HomeLatest NewsBIG NEWS: ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಮಾರ್ಗಸೂಚಿ

BIG NEWS: ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಸೆಪ್ಟೆಂಬರ್ ನಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಡಿಜಿಪಿ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರಚಿಸಿದ ಸಮಿತಿ ಸೆಪ್ಟೆಂಬರ್ ನಲ್ಲಿ ವರದಿ ನೀಡಲಿದೆ. ಅದರ ಆಧಾರದಲ್ಲಿ ನಿಯಮ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಕಳೆದ ಮೂರು ವರ್ಷದಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರಕರಣಗಳಿಗೆ ಸಂಬಂಧಿಸಿದಂತೆ 347 ಪ್ರಕರಣ ದಾಖಲಿಸಲಾಗಿದೆ. ಆನ್ಲೈನ್ ಗೇಮಿಂಗ್ ಸಮಸ್ಯೆ ನಿವಾರಿಸಲು 2020ರಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಹೈಕೋರ್ಟ್ ನಲ್ಲಿ ತಿದ್ದುಪಡಿ ರದ್ದು ಮಾಡಲಾಗಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ವಿಚಾರಣೆ ಬಾಕಿ ಇದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular