HomeKarnatakaBIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು HDK ನಾಮಪತ್ರ ಸಲ್ಲಿಕೆ

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು HDK ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರಿಗೆ ಗೋವಾ ಮುಖ್ಯಮಂತ್ರಿ ಸಾವಂತ್ ಸೇರಿದಂತೆ ಹಲವು ಬಿಜೆಪಿ ನಾಯಕರು ಸಹ ಸಾಥ್ ನೀಡಲಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದ್ದು, ಹೀಗಾಗಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರುಗಳು ಇಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular