ಗುಂಡ್ಲುಪೇಟೆ : ಅಂತ್ಯಕ್ರಿಯೆ ವೇಳೆ ಹೆಜ್ಜೇನು ದಾಳಿ, 19 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಗುಂಡ್ಲುಪೇಟೆ : ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

ಗಾಯಾಳುಗಳಲ್ಲಿ ಕೆಲವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಕೆಲವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸವಾಪುರ ಗ್ರಾಮದಲ್ಲಿ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆ ಮೃತ ದೇಹವನ್ನು ಅಂತ್ಯಕ್ರಿಯೆ ನಡೆಸಲು ಸ್ಮಶಾನಕ್ಕೆ ಗ್ರಾಮಸ್ಥರು ಕೊಂಡೊಯ್ದಿದ್ದಾರೆ. ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷ್ಟರಲ್ಲಿ ಮರದಲ್ಲಿದ್ದ ಹೆಚ್ಚೇನುಗಳು ದಾಳಿ ನಡೆಸಿದೆ. ಈ ವೇಳೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಆದರೂ ಹೆಜ್ಜೇನು ಜನರನ್ನು ಅಟ್ಟಾಡಿಸಿಕೊಂಡು ಹಲವರಿಗೆ ಸರಿಯಾಗಿ ಕಚ್ಚಿದೆ. ಹೆಚ್ಚು ಗಾಯಗೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read