ಬೆಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳಿಗೆ ತಕ್ಷಣ ಭದ್ರತೆ ಒದಗಿಸಲು ತುರ್ತು ಕ್ರಮಕ್ಕೆ ಆದೇಶ ನೀಡಲಾಗಿದೆ.
ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈ ಕುರಿತಾಗಿ ಆದೇಶಿಸಿದ್ದಾರೆ. ರಾಜ್ಯದ ಜಲಾಶಯಗಳ ಭದ್ರತಾ ನಿರ್ವಹಣಾ ಸಂಸ್ಥೆಗಳು ಮತ್ತು ನಿಗಮಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದ್ದು, ವಲಯ ವ್ಯಾಪ್ತಿಯ ಜಲಾಶಯಗಳಿಗೆ ಪೊಲೀಸ್ ಇಲಾಖೆಯ ಜೊತೆಗೆ ಸಮನ್ವಯ ಕಾಪಾಡಿಕೊಂಡು ಸಂಪೂರ್ಣ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದ್ದಾರೆ.
ಕೆಡಿಪಿ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ನಿರ್ದೇಶನ ನೀಡಲಾಗಿದ್ದು, ಭದ್ರತೆಯಲ್ಲಿ ವ್ಯತ್ಯಾಸವಾದರೆ ಸಂಬಂಧಿಸಿದ ಯೋಜನಾಧಿಕಾರಿಗಳು, ಜಲಾಶಯದ ಅಧಿಕಾರಿಗಳೇ ಹೊಣೆಗಾರರಾಗಿರುತ್ತೀರಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಜಲ ಸಂಪನ್ಮೂಲ ಇಲಾಖೆ ಎಸಿಎಸ್ ಆದೇಶ ಹೊರಡಿಸಿದ್ದಾರೆ.