ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಚರ್ಚೆಯನ್ನು ಕೈಗೆತ್ತಿ ಕೊಂಡಿದೆ.
ದೆಹಲಿಯಲ್ಲಿ ನಾಯಕತ್ವ ವಿಚಾರವಾಗಿ ಚರ್ಚೆ ಶುರುವಾಗಿದೆ. ಮೊದಲ ಬಾರಿಗೆ ನಾಯಕತ್ವ ಕುರಿತ ಚರ್ಚೆಯಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಇದುವರೆಗೆ ಯಾವ ಮುನ್ಸೂಚನೆ ನೀಡದೆ ಸುಮ್ಮನಿದ್ದ ಹೈಕಮಾಂಡ್ ಇದೀಗ ನಿನ್ನೆ ಮೊದಲ ಬಾರಿ ವಿಷಯ ಚರ್ಚೆಗೆ ಕೈಗೆತ್ತಿಕೊಂಡಿದೆ.
ಸೋನಿಯಾ ಅವರಿಗೆ ಎಲ್ಲಾ ಮಾಹಿತಿಯನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೀಡಿದ್ದಾರೆ. ಸಿದ್ದರಾಮಯ್ಯ ಮುಂದುವರಿಕೆ ಅಥವಾ ಬದಲಾವಣೆಯ ಕುರಿತಾಗಿ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ. ಅದರಿಂದಾಗುವ ಲಾಭ ನಷ್ಟದ ಬಗ್ಗೆಯೂ ಕಾಂಗ್ರೆಸ್ ನಾಯಕರಿಂದ ಪ್ರಾಥಮಿಕ ಚರ್ಚೆ ನಡೆದಿದೆ. ಎರಡು ಕಡೆಯ ಶಾಸಕರ ಭೇಟಿ, ಘೋಷಣೆಗಳ ಬಗ್ಗೆಯೂ ಸೋನಿಯಾ ಗಾಂಧಿಯವರ ಗಮನಕ್ಕೆ ವೇಣುಗೋಪಾಲ್ ತಂದಿದ್ದಾರೆ.
ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ಸದ್ಯ ಗೊಂದಲಕ್ಕೆ ಬ್ರೇಕ್ ಹಾಕಲಾಗಿದೆ. ಗೊಂದಲಕ್ಕೆ ಬ್ರೇಕ್ ಹಾಕಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದಾರೆ. ಸಂಸತ್ ಅಧಿವೇಶನದ ನಂತರ ಮತ್ತೊಮ್ಮೆ ಈ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಯಾವುದೇ ಅಂತಿಮ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿಲ್ಲ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಾಯಕತ್ವ ವಿಚಾರ ಹೈಕಮಾಂಡ್ ಮುಂದೆ ಇದೆ ಎನ್ನುವುದು ಖಚಿತವಾಗಿದೆ.
