ಬೆಂಗಳೂರು: ಕರ್ನಾಟಕ ಅಬಕಾರಿ ನೀತಿ ತಿದ್ದುಪಡಿ ನಿಯಮಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಲೈಸೆನ್ಸ್ ಇ- ಹರಾಜಿಗೆ ಅವಕಾಶ ಕಲ್ಪಿಸುವ ತಿದ್ದುಪಡಿಗೆ ಮಧ್ಯಂತರ ತಡೆ ಆದೇಶ ನೀಡಲಾಗಿದೆ.
ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಹೈಕೋರ್ಟ್ ಪೀಠದಿಂದ ಮಧ್ಯಂತರ ಆದೇಶ ನೀಡಲಾಗಿದೆ. ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಎಸ್. ಗುರುಸ್ವಾಮಿ ಮತ್ತಿತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಕಾಯ್ದೆಯಲ್ಲಿ ಇಲ್ಲದ ಷರತ್ತುಗಳನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ. ಅವಧಿ ಮುಗಿದ ಲೈಸೆನ್ಸ್ ಗಳನ್ನು ಮುಕ್ತಾಯಗೊಳಿಸಲಾಗುತ್ತಿದೆ. ಲೈಸೆನ್ಸ್ ನವೀಕರಿಸುವ ಅವಕಾಶ ನಿರಾಕರಿಸಲಾಗಿದೆ ಎಂದು ವಾದ ಮಂಡಿಸಿದ್ದಾರೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಡಿ.ಆರ್. ರವಿಶಂಕರ್ ವಾದ ಮಂಡಿಸಿದ್ದಾರೆ. ತಿದ್ದುಪಡಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.
