ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದ್ದು, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು.
ಆಕ್ಷೇಪಣೆ / ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಈ ಕುರಿತಾಗಿ ಉತ್ತರ ನೀಡಿದ್ದಾರೆ.
