HomeLatest NewsBIG NEWS: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆ

BIG NEWS: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದ್ದು, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು.

ಆಕ್ಷೇಪಣೆ / ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್‌ ಅವರು ಈ ಕುರಿತಾಗಿ ಉತ್ತರ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular