HomeLatest NewsBIG NEWS: ರಾಜ್ಯದಲ್ಲಿ ತಲಾದಾಯ ಭಾರಿ ಏರಿಕೆ: ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ

BIG NEWS: ರಾಜ್ಯದಲ್ಲಿ ತಲಾದಾಯ ಭಾರಿ ಏರಿಕೆ: ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ

ಬೆಂಗಳೂರು: ತೆರಿಗೆ ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕ 2024- 25 ನೇ ಸಾಲಿನಲ್ಲಿ ತಲಾದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.

ಕಳೆದ ಒಂದು ದಶಕದಲ್ಲಿ ತಲಾದಾಯ ಹೆಚ್ಚಳ ಪ್ರಮಾಣದಲ್ಲಿಯೂ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 2014-15ರಲ್ಲಿ ಕರ್ನಾಟಕ ಜನರ ತಲಾದಾಯ 1,05,697 ರೂ. ಇತ್ತು. 2024- 25ರಲ್ಲಿ ಶೇಕಡ 93.6 ರಷ್ಟು ಏರಿಕೆಯಾಗಿದ್ದು, 2,04,605ರೂಪಾಯಿಗೆ ತಲುಪಿದೆ.

2024-25ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಭಾರತದ ಒಟ್ಟು ತಲಾ ರಾಷ್ಟ್ರೀಯ ಆದಾಯವು (ಎನ್‌ಎನ್‌ಐ) 1,14,710 ರೂ. ಆಗಿದೆ. ರಾಷ್ಟ್ರೀಯ ಸರಾಸರಿಗಿಂತ ದುಪ್ಪಟ್ಟು ಪ್ರಮಾಣದಲ್ಲಿ ತಲಾದಾಯ ಹೆಚ್ಚಳವಾಗಿದೆ. 1.96.309 ರೂ. ತಲಾದಾಯ ಹೊಂದಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ ಎಂದು ಲೋಕಸಭೆಗೆ ಕೇಂದ್ರ ಹಣಕಾಸು ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular