HomeKarnatakaBIG NEWS: ಹಾಸನ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

BIG NEWS: ಹಾಸನ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ.

 ಅನಧಿಕೃತವಾಗಿ ಬೀಜ, ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ 1966 ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ.ಮೌಲ್ಯದ 180 ಕೆ.ಜಿ.ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು , ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ಪುಷ್ಪಗಿರಿ ಅಗ್ರೋ ಕೇಂದ್ರದಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು 12 ಸಾವಿರ ರೂ.ಮೌಲ್ಯದ 30 ಕೆ.ಜಿ.ಹೈಬ್ರಿಡ್ ಮೆಕ್ಕೆಜೋಳ ಹಾಗೂ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಮದಿಹಳ್ಳಿಯ ಶ್ರೀ ವೆಂಕಟೇಶ್ವರ ಟ್ರೇಡರ್ಸ್‌ನಲ್ಲಿ ಕಾನೂನು ಉಲ್ಲಂಘಿಸಿ ದಾಸ್ತಾನು ಮಾಡಲಾಗಿದ್ದ ಸುಮಾರು 1.77 ಲಕ್ಷ ಮೌಲ್ಯದ 88 ಚೀಲ ಯೂರಿಯಾ,ಪಾಸ್ಫೋ ಜಿಪ್ಸಮ್ ಗ್ರ್ಯಾನ್ಯುಲ್ಸ್  ವಶಪಡಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 86 ಸಾವಿರ ರೂ.ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಡ್ಯ ತಾಲ್ಲೂಕಿನ ಇಂದುವಾಳದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 300 ಚೀಲ ಎನ್.ಎಫ್.ಎಲ್.ಯೂರಿಯಾವನ್ನು ಮಂಡ್ಯದ ಕೃಷಿ ಅಧಿಕಾರಿಗಳು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಬೀಜ, ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದರೆ ಕೃಷಿ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular