BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ಅಭಿವೃದ್ಧಿಗೆ 618.75 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರಿನ ದಾಸನಪುರ, ಕೋಲಾರ, ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ 30 ಟಿಪಿಡಿ ಬಯೋ ಸಿಎನ್‌ಜಿ ಪ್ಲಾಂಟ್ ಬದಲಾಗಿ 50 ಟಿಪಿಡಿ ಬಯೋ ಸಿಎನ್‌ಜಿ ಪ್ಲಾಂಟ್ ಅನ್ನು ₹74.88 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ನಿರ್ಧಾರ

ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ₹618.75 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಜಾಸೌಧ, ತಾಲೂಕು ಆಡಳಿತ ಕೇ೦ದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ₹16 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.

ಗದಗ ಜಿಲ್ಲೆಯ ರೋಣ ತಾಲೂಕಿನ 9 ಸಣ್ಣ ನೀರಾವರಿ / ಜಿಲ್ಲಾ ಪಂಚಾಯತ್ ಕೆರೆಗಳಿಗೆ ಮಲಪ್ರಭಾ ಬಲದಂಡೆ ಕಾಲುವೆ ಚೈನೇಜ್ 129 ಕಿ.ಮೀ. ನಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆಯನ್ನು ₹43.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ₹10.89 ಕೋಟಿ ಮೊತ್ತದಲ್ಲಿ ಖರೀದಿಸಲು ನಿರ್ಧಾರ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ ಜಿಲ್ಲಾ ಆಡಳಿತ ಕೇಂದ್ರ ಕಟ್ಟಡದ ವಿಸ್ತರಣಾ ಕಾಮಗಾರಿಯ ₹55 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಸ‌ರ್.ಎಂ.ವಿಶ್ವೇಶ್ವರಯ್ಯ ನಗರದಲ್ಲಿ ನಿರ್ಮಿಸುತ್ತಿರುವ ಛಲವಾದಿ ಸಮುದಾಯ ಭವನದ ₹22.33 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಗದಗ ಜಿಲ್ಲೆ ರೋಣ ವಿಭಾಗದಡಿ ಬರುವ ಮಲಪ್ರಭಾ ಬಲದಂಡೆ ಕಾಲುವೆಯ 56ಎ, 56ಬಿ, 56ಸಿ, 57 ಮತ್ತು ಇಟಗಿ ವಿತರಣಾ ಕಾಲುವೆಗಳ ಮೊದಲನೇ ಹಂತದ ಆಧುನೀಕರಣ ಕಾಮಗಾರಿಗಳನ್ನು 31.08 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

90 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅನುಷ್ಠಾನಗೊಂಡಿರುವ ಫಿಟ್ಟ‌ರ್ ಮತ್ತು ಎಲೆಕ್ನಿಷಿಯನ್ ವೃತ್ತಿಗಳಿಗೆ ಅಗತ್ಯವಿರುವ ಉಪಕರಣಗಳನ್ನು ₹50 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಿ ಒದಗಿಸಲು ತೀರ್ಮಾನ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವ್ಯಾಪ್ತಿಯಲ್ಲಿನ ಕರ್ನಾಳ್ ಏತ ನೀರಾವರಿ ಯೋಜನೆಯ ₹50.75 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read