BIG NEWS : ‘ಮಲೈ ಮಹದೇಶ್ವರಸ್ವಾಮಿ’ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ‘CM ಸಿದ್ದರಾಮಯ್ಯ’ ತೆಗೆದುಕೊಂಡ ಪ್ರಮುಖ ನಿರ್ಣಯಗಳು.!

ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡರು.

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತವಾಗಲಿದೆ. ಇಲ್ಲಿಯವರೆಗೂ ಬೆಟ್ಟ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿರಲಿಲ್ಲ. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು.

ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು.
ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎ.ಇ.ಇ ಯನ್ನು ಪ್ರಾಧಿಕಾರಕ್ಕೆ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಲಾಯಿತು.

ಹಿಂದಿನ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಬಗ್ಗೆ ತಕ್ಷಣ ಗಮನ ಹರಿಸಬೇಕು.

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟು೦ಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ನೀಡದಂತೆ ತಡೆಯುವ ಬಗ್ಗೆ ಕ್ರಮ ವಹಿಸಬೇಕು.ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು ₹12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇದ್ದು, ಇದನ್ನು ನಮ್ಮ ಸರ್ಕಾರ ಸಹಿಸಲ್ಲ.ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸಲಾಗುವುದು.

2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ಧಪಡಿಸಿ, ಸಲ್ಲಿಕೆ ಮಾಡಬೇಕು.ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಯಾವುದೇ ಅಡೆತಡೆ ಇರಬಾರದು.
ಭಕ್ತಾಧಿಗಳಿಗೆ ಶುದ್ಧ ಕುಡಿಯುವ ನೀರು, ಸ್ವಚ್ಚ ಶೌಚಾಲಯ, ಪರಿಸರದ ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read