HomeLatest NewsBIG NEWS: ದೇವಾಲಯಗಳ ಜಾಗ ಒತ್ತುವರಿ ತೆರವಿಗೆ ಮಹತ್ವದ ಕ್ರಮ

BIG NEWS: ದೇವಾಲಯಗಳ ಜಾಗ ಒತ್ತುವರಿ ತೆರವಿಗೆ ಮಹತ್ವದ ಕ್ರಮ

ಬೈಂದೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ದೇವಾಲಯದ ಅಭಿವೃದ್ಧಿ ಕಾರ್ಯಗಳ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ ಅನೇಕ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಈಗಾಗಲೇ 15,000 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 20,000 ಎಕರೆ ಜಾಗ ಒತ್ತುವರಿ ಬಾಕಿ ಇದ್ದು, ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲ್ಲೂರು ದೇವಾಲಯ ವತಿಯಿಂದ ವೈದ್ಯಕೀಯ ಕಾಲೇಜು, ಆಸ್ಪತ್ರೆ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ನಿರ್ಮಾಣ ಸೇರಿ ಅನೇಕ ಬೇಡಿಕೆಗಳಿದ್ದು, ಸ್ಥಳೀಯ ಶಾಸಕರು, ಮಾಜಿ ಶಾಸಕರು, ದೇವಾಲಯದ ಆಡಳಿತ ಮಂಡಳಿ ಮತ್ತು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular