ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಜಿಲ್ಲಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಮಧ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಉಲ್ಲೇಖದ ಪತ್ರದಲ್ಲಿ ಆರಕ್ಷಕ ಅಧೀಕ್ಷಕರು, ಚಾಮರಾಜನಗರ ಜಿಲ್ಲೆ ಇವರು ದಿನಾಂಕ: 11.04.2025 ರಂದು ಚಾಮರಾಜನಗರ ಜಿಲ್ಲಾಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಜಿಲ್ಲಾಯಾದ್ಯಂತ ದಿನಾಂಕ: 13.04.2025 ರ ಮಧ್ಯರಾತ್ರಿ 12.00 ಗಂಟೆಯಿಂದ ದಿನಾಂಕ: 14.04.2025ರ ಮಧ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲು ಕೋರಿರುತ್ತಾರೆ.
ಆದುದರಿಂದ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ: 14.04.2025 ರಂದು ಚಾಮರಾಜನಗರ ಜಿಲ್ಲಾಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ರವರ ಜಯಂತಿ ದಿನಾಂಕ: 13.04.2025 0 3 12.00 ಗಂಟೆಯಿಂದ ದಿನಾಂಕ: 14.04.2025ರ ಮಧ್ಯರಾತ್ರಿ 12.00 ಗಂಟೆಯವರೆಗೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಧ್ಯ ಮಾರಾಟವನ್ನು ನಿಷೇಧಿಸುವುದು ಅವಶ್ಯಕವೆಂದು ಮನಗಂಡು ಈ ಕೆಳಕಂಡಂತೆ ಆದೇಶಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ದಿನಾಂಕ: 14.04.2025 ರಂದು ಚಾಮರಾಜನಗರ ಜಿಲ್ಲಾಯಾಧ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ॥ ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ ನಡೆಯುವುದರಿಂದ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಶಿಲ್ಪಾನಾಗ್ ಸಿ.ಟಿ, ಭಾ.ಆ.ಸೇ., ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಚಾಮರಾಜನಗರ ಜಿಲ್ಲೆ, ಚಾಮರಾಜನಗರ ಆದ ನನಗೆ ಮನವರಿಕೆಯಾಗಿರುವುದರಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ರ ಕಲಂ 21(1) ರಡಿಯಲ್ಲಿ ನನಗೆ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಚಾಮರಾಜನಗರ ಜಿಲ್ಲಾಯಾದ್ಯಂತ ಬರುವ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ದಿನಾಂಕ: 13.04.2025 ರ ಮಧ್ಯರಾತ್ರಿ 12.00 ಗಂಟೆಯಿಂದ ದಿನಾಂಕ: 14.04.2025ರ ಮಧ್ಯರಾತ್ರಿ 12.00 ಗಂಟೆಯವರೆಗೆ, ಮುಚ್ಚಿಸಿ, ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ಅಕ್ರಮ ದಾಸ್ತಾನು ಮಾಡದಂತೆ ನಿಷೇಧಿಸಿ ಆದೇಶಿಸಿದೆ. ಈ ಆದೇಶವನ್ನು ದಿನಾಂಕ: 11.04.2025 ರಂದು ನನ್ನ ಸಹಿ ಹಾಗೂ ಮೊಹರಿನೊಂದಿಗೆ ಹೊರಡಿಸಲಾಗಿದೆ.
