HomeLatest NewsBIG NEWS: ಸಂಪುಟ ಸಭೆಯಲ್ಲಿ ಇಂದು ಒಳ ಮೀಸಲಾತಿ ಜಾರಿ, ಬೆಳಗಾವಿ ಅಧಿವೇಶನ ಬಗ್ಗೆ ನಿರ್ಧಾರ...

BIG NEWS: ಸಂಪುಟ ಸಭೆಯಲ್ಲಿ ಇಂದು ಒಳ ಮೀಸಲಾತಿ ಜಾರಿ, ಬೆಳಗಾವಿ ಅಧಿವೇಶನ ಬಗ್ಗೆ ನಿರ್ಧಾರ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೂತನ ಕಾಯ್ದೆ ಜಾರಿಗೊಳಿಸುವ ಬಗ್ಗೆ ಕರಡು ನಿಯಮಗಳಿಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್.ಕೆ. ಪಾಟೀಲ್, ಹೆಚ್.ಸಿ. ಮಹದೇವಪ್ಪ ಅವರು ಒಂದು ಹಂತದ ಸಭೆ ನಡೆಸಿದ್ದಾರೆ.

ಇನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಕಿ ಅಂಶಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಅಲ್ಲದೇ, ಬೆಳಗಾವಿ ಚಳಿಗಾಲದ ಅಧಿವೇಶನ ನಡೆಸಲು ದಿನಾಂಕ ಅಂತಿಮಗೊಳಿಸುವ ಸಾಧ್ಯತೆ ಇದೆ. ಡಿಸೆಂಬರ್ 8 ರಿಂದ 19 ರವರೆಗೆ 10 ದಿನ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಇಂದು ಸಂಪುಟ ಸಭೆಯಲ್ಲಿ ಅಧಿಕೃತ ದಿನಾಂಕ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular