HomeKarnatakaBIG NEWS: IPS ಅಧಿಕಾರಿ ಡಿ.ರೂಪಾಗೆ ನೋಟೀಸ್ ಜಾರಿ; ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ

BIG NEWS: IPS ಅಧಿಕಾರಿ ಡಿ.ರೂಪಾಗೆ ನೋಟೀಸ್ ಜಾರಿ; ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ಹೇಳಿಕೆ ನೀಡದಂತೆ ಡಿ.ರೂಪಾ ಅವರಿಗೆ ಕೋರ್ಟ್ ನಿರ್ಬಂಧ ವಿಧಿಸಿದೆ.

ಡಿ.ರೂಪಾ ತಮ್ಮ ವಿರುದ್ಧ ಮಾಡಿರುವ ಸಾಲು ಸಾಲು ಆರೋಪಗಳಿಗೆ ಸಂಬಂಧಿಸಿದಂತೆ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ಕೋರಿ ರೋಹಿಣಿ ಸಿಂಧೂರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್, ಡಿ.ರೂಪಾ ಸೇರಿದಂತೆ 59 ಪ್ರತಿವಾದಿಗಳಿಗೆ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಿದೆ.

ಇನ್ನು ರೋಹಿಣಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿರುವ ಕೋರ್ಟ್, ರೂಪಾ ಅವರಿಗೆ ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular