BIG NEWS : ಇಂದು ಬೆಳಗ್ಗೆ 10.30ಕ್ಕೆ ನಂದಿಪರ್ವತ ಆಶ್ರಮದ ಆವರಣದಲ್ಲಿ `ಜೈನಮುನಿಗಳ’ ಅಂತ್ಯಸಂಸ್ಕಾರ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇಂದು ಬೆಳಗ್ಗೆ 9 ಗಂಟೆಗೆ ಜೈನಮುನಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ನಂತರ ಬೆಳಗ್ಗೆ 10.30 ಕ್ಕೆ ಹಿರೇಕೋಡಿಗೆ ಗ್ರಾಮದ ನಂದಿಪರ್ವತ ಆಶ್ರಮದ ಆವರಣದಲ್ಲಿ ಜೈನ ಸಂಪ್ರದಾಯದಂತೆ ಜೈನಮುನಿ ಸ್ವಾಮೀಜಿಗಳ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

ಜೈನ ಮುನಿ ಹತ್ಯೆ ಪ್ರಕರಣ ಸಂಬಂಧ ರಾಯಬಾಗ ತಾಲೂಕಿನ ಕಾಟಕಬಾವಿ ಗ್ರಾಮದ ನಾರಾಯಣ ಮಾಳಿ, ಹಸನ್ ಡಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿ 4 ಗಂಟೆಗೊಳಗಾಗಿ ಇಬ್ಬರುಉ ಆರಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read