BIG NEWS: JDS ನ ಮತ್ತೊಂದು ವಿಕೆಟ್ ಪತನ

ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದೆ.

ಜೆಡಿಎಸ್ ಗೆ ಗುಬ್ಬಿ ಶ್ರೀನಿವಾಸ್, ಎ.ಟಿ.ರಾಮಸ್ವಾಮಿ ರಾಜೀನಾಮೆ ಬೆನ್ನಲ್ಲೇ ಇದಿಗ ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ ನೀಡಿದ್ದಾರೆ.

400ಕ್ಕೂ ಹೆಚ್ಚು ಮುಖಂಡರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಶಿವಲಿಂಗೇಗೌಡ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಪಕ್ಷದಲ್ಲಿನ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡಿದ್ದೇನೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read