BREAKING : ಲಕ್ಷಾಂತರ ಜನರನ್ನು ಸೇರಿಸಿ ‘ದೇವೇಗೌಡೋತ್ಸವ’ ನಡೆಸಲು ಜೆಡಿಎಸ್ ನಿರ್ಧಾರ

ಬೆಂಗಳೂರು : ಶೀಘ್ರವೇ ಲಕ್ಷಾಂತರ ಜನರನ್ನು ಸೇರಿಸಿ ‘ದೇವೇಗೌಡೋತ್ಸವ’ ನಡೆಸಲು ಜೆಡಿಎಸ್ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಹಿನ್ನೆಲೆ ಬೃಹತ್ ಸಮಾವೇಶವನ್ನು ನಡೆಸಲು ಜೆಡಿಎಸ್ ನಿರ್ಧರಿಸಿದೆ. ಈ ಸಮಾವೇಶವನ್ನು ಹಾಸನ ಅಥವಾ ಮೈಸೂರಿನಲ್ಲಿ ನಡೆಸಲು ಯೋಚಿಸಲಾಗಿದೆ. ಲಕ್ಷಾಂತರ ಜನರನ್ನು ಸೇರಿಸಿ ಜೆಡಿಎಸ್ ಸಮಾವೇಶ ನಡೆಸಲಿದ್ದು, ಈ ಮೂಲಕ ಕಾಂಗ್ರೆಸ್ ಸಮಾವೇಶಕ್ಕೆ ಜೆಡಿಎಸ್ ಟಕ್ಕರ್ ನೀಡಲಿದೆ.

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದೆ. ಖಜಾನೆಯಲ್ಲಿ ಹಣವಿಲ್ಲ ,  ಅಭಿವೃದ್ಧಿಗೆ ಅನುದಾನ ಇಲ್ಲ,   ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ. ಗುತ್ತಿಗೆದಾರರಿಗೆ ಬಾಕಿ ಹಣ ಕೊಡುತ್ತಿಲ್ಲ ಇದು ಬುರುಡೆ ಸಿದ್ದರಾಮಯ್ಯನಬೊಗಳೆ ಸರ್ಕಾರದ ದಯನೀಯ ಸ್ಥಿತಿ.. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾವಿರಾರು ಹೊರಗುತ್ತಿಗೆ ನೌಕರರಿಗೆ ಕಳೆದ 6 ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿದೆ. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರೇ ನೀವು ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಡೆಯುತ್ತಿದ್ದೀರಿ ಅಲ್ಲವೇ? ವೇತನ ಸಿಗದೆ ಡೇಟಾ ಎಂಟ್ರಿ ಆಪರೇಟರ್ಸ್ ಮತ್ತು ಎಂಜಿನಿಯರ್ಸ್ ಬದುಕು ಮೂರಾಬಟ್ಟೆಯಾಗಿ ಬೀದಿಗೆ ಬಂದಿದೆ ಎಂದು ಜೆಡಿಎಸ್ ಕಿಡಿಕಾರಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read