ನವದೆಹಲಿ: ದೈಹಿಕ ಸಂಬಂಧವಿದ್ದ ಮಾತ್ರಕ್ಕೆ ಅತ್ಯಾಚಾರ ಆಗಲ್ಲ ಎಂದು ದೆಹಲಿಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ದೈಹಿಕ ಸಂಬಂಧ ಎಂದು ಆರೋಪಿಸಿದ ಮಾತ್ರಕ್ಕೆ ಅದು ಅತ್ಯಾಚಾರ ಎಂದು ಸಾಬೀತಾಗುವುದಿಲ್ಲ. ಅದಕ್ಕೆ ಸಾಕ್ಷಿಗಳಿರಬೇಕು ಎಂದು ತೀರ್ಪು ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ವಿಧಿಸಲಾದ ಶಿಕ್ಷೆ ಪ್ರಶ್ನೆ ವ್ಯಕ್ತಿ ಒಬ್ಬರು ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ದೈಹಿಕ ಸಂಬಂಧ ಪೋಕ್ಸೋ ಕಾಯ್ದೆಯಡಿ ಬಳಸಲಾಗಿಲ್ಲ. ಅದು ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎನ್ನುವುದನ್ನು ಸಾಬೀತುಪಡಿಸಲು ಸಾಕಾಗುವುದಿಲ್ಲ ಎಂದು ತಿಳಿಸಿದೆ. 10 ವರ್ಷ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಲಾಗಿದೆ.