BIG NEWS: K.H.ಮುನಿಯಪ್ಪಗೆ ದೇವನಹಳ್ಳಿ ಟಿಕೆಟ್; ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ವಿಧಾನಸಭಾ ಚುನವಾಣೆಗೆ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪನವರಿಗೆ ದೇವನಹಳ್ಳಿ ಟಿಕೆಟ್ ನೀಡಿರುವುದು ಅಲ್ಲಿನ ಸ್ಥಳೀಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಮುನಿಯಪ್ಪನವರಿಗೆ ದೇವನಹಳ್ಳಿಯಿಂದ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಈ ಹಿಂದಿನಿಂದಲೂ ಸ್ಥಳೀಯ ಕೈ ನಾಯಕರು ಮನವಿ ಮಾಡುತ್ತಿದ್ದರು. ಆದರೂ ಈಗ ಮುನಿಯಪ್ಪಗೆ ಟಿಕೆಟ್ ನೀಡಿರುವುದು ಅಸಮಾಧಾನ ಭುಗಿಲೇಳಲು ಕಾರಣವಾಗಿದೆ.

ಮುನಿಯಪ್ಪಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುವುದಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹೇಳಿದ್ದರು. ಆದರೂ ಹೈಕಮಾಂಡ್ ಮುನಿಯಪ್ಪಗೆ ಟಿಕೆಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಿತರು ಸಭೆ ನಡೆಸಲು ಸಜ್ಜಾಗಿದ್ದು, ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read