ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿಲ್ಲ. ಹೈಕಮಾಂಡ್ ಸೂಚನೆಯ ಮೇರೆಗೆ ಅವರನ್ನು ವಜಾ ಮಾಡಲಾಗಿದೆ.
ರಾಜಣ್ಣ ಅವರನ್ನು ರಾಜ್ಯಪಾಲರು ವಜಾಗೊಳಿಸಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತಾಗಿ ಪತ್ರ ಬರೆಯಲಾಗಿದೆ.
ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡ, ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ. ಸಂಪುಟದಿಂದ ಅವರನ್ನು ವಜಾ ಮಾಡಲಾಗಿದೆ. ಹೈಕಮಾಂಡ್ ಸೂಚನೆಯ ಮೇರೆಗೆ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತದೆ ಎಂದು ರಾಜಣ್ಣ ಹೇಳಿದ್ದರು. ಈಗಲೇ ಕ್ರಾಂತಿಯಾಗಿದೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ.
