HomeLatest NewsBIG NEWS: ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿಲ್ಲ, ಸಚಿವ ಸಂಪುಟದಿಂದ ವಜಾ: ರಾಜ್ಯಪಾಲರ ಕಚೇರಿಯಿಂದ ಆದೇಶ

BIG NEWS: ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿಲ್ಲ, ಸಚಿವ ಸಂಪುಟದಿಂದ ವಜಾ: ರಾಜ್ಯಪಾಲರ ಕಚೇರಿಯಿಂದ ಆದೇಶ

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿಲ್ಲ. ಹೈಕಮಾಂಡ್ ಸೂಚನೆಯ ಮೇರೆಗೆ ಅವರನ್ನು ವಜಾ ಮಾಡಲಾಗಿದೆ.

ರಾಜಣ್ಣ ಅವರನ್ನು ರಾಜ್ಯಪಾಲರು ವಜಾಗೊಳಿಸಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತಾಗಿ ಪತ್ರ ಬರೆಯಲಾಗಿದೆ.

ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡ, ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ. ಸಂಪುಟದಿಂದ ಅವರನ್ನು ವಜಾ ಮಾಡಲಾಗಿದೆ. ಹೈಕಮಾಂಡ್ ಸೂಚನೆಯ ಮೇರೆಗೆ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತದೆ ಎಂದು ರಾಜಣ್ಣ ಹೇಳಿದ್ದರು. ಈಗಲೇ ಕ್ರಾಂತಿಯಾಗಿದೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular